ಬೆಂಗಳೂರು:ಉಪಮುಖ್ಯಮಂತ್ರಿ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಕೆ.ಆರ್. ಮಾರುಕಟ್ಟೆ ವಿವಿಧ ಭಾಗಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ್ದು, ವ್ಯಾಪಾರಿಗಳ ಜೊತೆ ಮಾತುಕತೆ ನಡೆಸಿದರು. ಮಾರುಕಟ್ಟೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ. ವ್ಯವಸ್ಥೆ ಸರಿಯಾಗಿಲ್ಲ, ಸ್ವಚ್ಛತೆಯನ್ನು ಕಾಪಾಡಿಲ್ಲ. ಯಾವುದೂ ಸೂಕ್ತ ರೀತಿಯಲ್ಲಿ ಇಲ್ಲ. ಇಲ್ಲಿನ ಅಧಿಕಾರಿಗಳು ಹೆಚ್ಚು ನಿರ್ಲಕ್ಷ್ಯದಿಂದ ಇರುವುದು ಗಮನಕ್ಕೆ ಬಂದಿದೆ. ನಾನೇ ಖುದ್ದು ಪ್ರತಿಯೊಂದನ್ನು ವೀಕ್ಷಿಸಿದ್ದೇನೆ. ಅಧಿಕಾರಿಗಳ ನಿರ್ಲಕ್ಷ್ಯ ಇಲ್ಲಿ ಎದ್ದು ಕಾಣುತ್ತಿದೆ ಎಂದು ಪರಮೇಶ್ವರ್ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು. ಈ ವೇಳೆ ಮೇಯರ್ ಗಂಗಾಂಬಿಕೆ, ಉಪಮೇಯರ್ ರಮೀಳ ಉಮಾಶಂಕರ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಉಪಸ್ಥಿತರಿದ್ದರು.










