ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರ ನಿಶ್ಚಿತಾರ್ಥ ಬನಶಂಕರಿಯ ಧರ್ಮಗಿರಿ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ನಿನ್ನೆ ನೆರವೇರಿದ್ದು, ದ್ರುವ ಸರ್ಜಾ ಅವರು ಬಾಲ್ಯದ ಗೆಳತಿ ಪ್ರೇರಣಾ ಅವರಿಗೆ ಉಂಗುರ ತೊಡಿಸಿದರು. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ದೇಶಕ ಹರ್ಷ, ಪ್ರಜ್ವಲ್, ರಾಕ್‍ಲೈನ್ ವೆಂಕಟೇಶ್, ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರಿಗೆ ಶುಭ ಹಾರೈಸಿದರು. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರ ವಿವಾಹ ದಿನಾಂಕವನ್ನು 2019ರ ಏಪ್ರಿಲ್ ತಿಂಗಳಿನಲ್ಲಿ ನಿಗದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.










