ಇಂದು ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ ಸಮಾರಂಭ…

558

ಬೆಂಗಳೂರು- ಕಳೆದ ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಜಿ ಪರಮೇಶ್ವರ್ ಅವರ ಅವಧಿ ಅಂತ್ಯವಾಗಿದ್ದು,ನೂತನ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ ಸಮಾರಂಭವು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದಿದ್ದು ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಅನೇಕ ನಾಯಕರು ಭಾಗವಹಿಸಿದ್ದು. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅವರನ್ನು ನಿರ್ಗಮಿತ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ನೂತನ ಸಾರಥಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ದಿನೇಶ್ ಗುಂಡೂರಾವ್  ಅವರು ಅಧಿಕಾರ ಸ್ವೀಕರಿಸಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬುವ ಭರವಸೆ ನೀಡಿದರು