ನಿರ್ದೇಶಕ ಎಂ.ಎಸ್ ರಾಜಶೇಖರ್ ವಿಧಿವಶ…

226
firstsuddi

ಬೆಂಗಳೂರು: ನಿರ್ದೇಶಕ ಎಂ.ಎಸ್ ರಾಜಶೇಖರ್ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಎಂ.ಎಸ್ ರಾಜಶೇಖರ್ ಅವರು ಡಾ. ರಾಜ್ ಕುಮಾರ್ ಅಭಿನಯದ ಧ್ರುವತಾರೆ , ನಂಜುಂಡಿ ಕಲ್ಯಾಣ, ರಥಸಪ್ತಮಿ, ಮನಮೆಚ್ಚಿದ ಹುಡುಗಿ, ಸೇರಿದಂತೆ ಸಾಕಷ್ಟು ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.