ತುಮಕೂರು: ಮಾಸಾಶನ ಸೌಲಭ್ಯ ನೀಡಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ವಿಶೇಷಚೇತನನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಯ್ಯನಪಾಳ್ಯ ಗ್ರಾಮದಲ್ಲಿ ನಡೆದಿದೆ.ಧರಣೇಂದ್ರ (20) ಆತ್ಮಹತ್ಯೆ ಮಾಡಿಕೊಂಡ ವಿಕಲಚೇತನ . ಮಾಸಾಶನ ನೀಡಲು ವಿಳಂಬ ಮಾಡಿದಕ್ಕೆ ಧರಣೇಂದ್ರ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.










