ಬೆಂಗಳೂರು- ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಲ್ಲೇಶ್ವರಂನ ಬಿಜೆಪಿ ಕಛೇರಿಯಲ್ಲಿ ನಡೆದಿದ್ದು, ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ,ಅವರು ವಿಧಾನಸಭೆ ಚುನಾವಣೆಯಲ್ಲಿ ನಮ್ಮದೇ ತಪ್ಪಿನಿಂದ ಗೆಲ್ಲಲಿಲ್ಲ.ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು ಹಾಗೂ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದ ಅವರು ನಂತರ ಈಗ ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರದಲ್ಲಿ ಎಚ್ ಡಿ ರೇವಣ್ಣರದ್ದೇ ಕಾರುಬಾರು. ಎಲ್ಲಾ ಇಲಾಖೆಗಳಲ್ಲೂ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಎಂದು ಬಿಎಸ್ ಯಡಿಯೂರಪ್ಪ ಹೆಚ್ ಸಿ ರೇವಣ್ಣ ವಿರುದ್ದ ಆಕ್ರೋಶ ವ್ಯಕ್ತಡಿಸಿದ್ಧಾರೆ