ವಿಜಯಪುರ: ಸಹೋದರರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಅಣ್ಣ ಸಲೀಂ ಅಬ್ದುಲ ಕೋಚಮನ(30) ಎಂಬುವವನನ್ನು ಸರ್ಕಾರಿ ಹೈಸ್ಕೂಲ್ ಆವರಣದಲ್ಲಿ ಕತ್ತು ಸೀಳಿ ಕೊಲೆ ಮಾಡಿದ್ದು, ಹಾಗೂ ತಮ್ಮ ರಜಾಕ್ ಅಬ್ದುಲ್ ಕೋಚಮನ(28) ಎಂಬುವವನನ್ನು ಜಯ ಕರ್ನಾಟಕ ಕಾಲೋನಿಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಾಂಧಿಚೌಕ್ ಹಾಗೂ ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.










