ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. 2018-2019 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಅವರು ಟ್ವೀಟ್ ಮಾಡಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶ ಬಂದಿದೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಕಡಿಮೆ ಅಂಕ ಬಂದಿದೆ, ಅನುತ್ತೀರ್ಣರಾಗಿದ್ದೇವೆ ಎಂದು ದುಃಖ ಪಡಬೇಡಿ. ಸ್ವಾಮೀ ವಿವೇಕಾನಂದರು ಒಂದು ಮಾತನ್ನು ಹೇಳಿದ್ದಾರೆ. ಏಳಿ, ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು. ಮುಂದಿನ ನಿಮ್ಮ ಭವಿಷ್ಯಕ್ಕೆ ಶುಭವಾಗಲಿ ಎಂದು ಡಿ.ವಿ ಸದಾನಂದಗೌಡ ಅವರು ತಿಳಿಸಿದ್ದಾರೆ.










