ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ-ಐವರು ಯೋಧರು ಹುತಾತ್ಮ-ಐವರು ಉಗ್ರರು ಹತ…

130
firstsuddi

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರನ್‍ನ ಅರಣ್ಯ ಪ್ರದೇಶಗಳಲ್ಲಿ ಉಗ್ರರು ಒಳ ನುಸುಳುತ್ತಿದ್ದಾರೆ ಎಂಬ ಮಾಹಿತಿಯನ್ನು ತಿಳಿದ ಭಾರತೀಯ ಯೋಧರು ಕಾರ್ಯಾಚರಣೆ ಆರಂಭಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಇದಕ್ಕೆ ಪ್ರತಿಯಾಗಿ ಪ್ರತ್ಯುತ್ತರ ನೀಡಿದ ಭಾರತೀಯ ಯೋಧರು ಕೂಡಾ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.