ವಿಜಯವಾಡ: ತನ್ನ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಅಭಿಮಾನಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯವಾಡದಲ್ಲಿ ನಡೆದಿದೆ..ಕೊಮಟಾವೆಲ್ಲಿ ಅನಿಲ್ ಕುಮಾರ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡ ಯುವಕ, ಅನಿಲ್ ಕುಮಾರ್ ನಟ ಪವನ್ ಕಲ್ಯಾಣ್ ಅವರ ಅಪ್ಪಟ ಅಭಿಮಾನಿ. ಒಮ್ಮೆಯಾದರೂ ತನ್ನ ನೆಚ್ಚಿನ ನಟ ಪವನ್ ಕಲ್ಯಾಣ್ ಅವರನ್ನು ನೇರವಾಗಿ ಭೇಟಿ ಆಗಬೇಕೆಂದು ಆಸೆಯನ್ನು ಹೊಂದಿದ್ದ. ಸಾಕಷ್ಟು ಬಾರಿ ಭೇಟಿ ಮಾಡಲಿಕ್ಕೆ ಪ್ರಯತ್ನ ಪಟ್ಟರೂ ಸಾಧ್ಯವಾಗಿಲ್ಲ.
ಪವನಣ್ಣ ನೀವಂದ್ರೆ ನನಗೆ ಹುಚ್ಚು ಅಭಿಮಾನ. ಬದುಕಿರುವಾಗ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ನಿಮ್ಮ ಕೈಯಾರೆ ನನ್ನ ಅಂತ್ಯಕ್ರಿಯೆ ನಡೆಯಬೇಕು ಇಂತಿ ನಿಮ್ಮ ಅನಿಲ್ ಕುಮಾರ್. ಎಂದು ಡೆತ್ ನೋಟ್ ನಲ್ಲಿ ಬರೆದು ಸಾವಿಗೆ ಶರಣಾಗಿದ್ದಾನೆ.