ಕಬ್ಬು ದರ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಪ್ರತಿಭಟನೆ…

246
firstsuddi

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ಹಾಗೂ ಕಬ್ಬಿನ ದರ ನಿಗದಿ  ಕುರಿತು ಬೆಳಗಾವಿ ಡಿಸಿ ಕಚೇರಿ ಎದುರು ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು,  ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ  ಪ್ರತಿಭಟನಾನಿರತರು ಘೋಷಣೆ ಕೂಗಿ ಆಕ್ರೋಶ ‌ವ್ಯಕ್ತಪಡಿಸುತ್ತಿದ್ದಾರೆ.ರೈತರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟ ತೀವ್ರವಾಗಿದೆ. ರೈತರು ಅರೆಬೆತ್ತಲೆ ಪ್ರತಿಭಟನೆ ಮುಂದುವರೆಸಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೆಳಗಾವಿಗೆ ಬರಬೇಕೆಂದು ಆಗ್ರಹಿಸಿದ್ದಾರೆ.