ಕೊಡಗು : ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದ ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಮಾಡಿ ಉತ್ತಮ ಜೀವನ ನಡೆಸುತ್ತಿರುವ ಬಹಳಷ್ಟು ರೈತರು ಇದ್ದಾರೆ. ರೈತರ ಆತ್ಮಹತ್ಯೆಗೆ ನೀರಾವರಿ ಕಾರಣವಲ್ಲ. ಮಂಡ್ಯ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯವಿದ್ದರೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಾವರಿ ಸೌಲಭ್ಯವಿಲ್ಲದ ಕೋಲಾರ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಕಡಿಮೆ ಇದೆ. ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ತನ್ನ ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲು ಆಗದ ಹೇಡಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಈಸಬೇಕು, ಇದ್ದು ಜಯಿಸಬೇಕು. ಹೇಡಿತನದ ಕೆಲಸಕ್ಕೆ ರೈತರು ಮುಂದಾಗಬಾರದು ಎಂದು ಹೇಳಿದ್ದಾರೆ.










