ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಹೇಳಿಕೆ-ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್‍ಐಆರ್ ದಾಖಲು…

215
firstsuddi

ದಾವಣಗೆರೆ : ಮಸೀದಿ ಹಾಗೂ ಮುಸ್ಲಿಂ ಸಮುದಾಯದ ಕುರಿತು ನಿಂದನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಳೆದ 10 ದಿನಗಳ ಹಿಂದೆ ಹೊನ್ನಾಳಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪರ ಜನಜಾಗೃತಿ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಅವರು ಇಸ್ಲಾಂ ಧರ್ಮದ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಹೊನ್ನಾಳಿಯ ಜಾಮೀಯ ಮಸೀದಿ ಅಧ್ಯಕ್ಷ ಹಬೀಬುಲ್ಲಾ ಸಾಬ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ರೇಣುಖಾಚಾರ್ಯ ಅವರ ವಿರುದ್ಧ ಎಫ್‍ಐಆರ್  ದಾಖಲಾಗಿದೆ ಎಂದು ಎಸ್ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.