ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋ ಪ್ರದರ್ಶನದ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ 250ಕ್ಕೂ ಹೆಚ್ಚು ಕಾರುಗಳು ಪಾರ್ಕಿಂಗ್ ಸ್ಥಳದಲ್ಲಿ ಅಗ್ನಿಗಾಹುತಿಯಾಗಿವೆ. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ಹಿನ್ನೆಲೆಯಲ್ಲಿ ಕೆಲಕಾಲ ಏರ್ ಶೋ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.









