ಜಮ್ಮು ಮತ್ತು ಕಾಶ್ಮೀರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ 5ಗಂಟೆ ಸುಮಾರಿಗೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ನಗ್ರೋಟಾದ ಟೋಲ್ ಬಳಿ ಭದ್ರತಾ ಪಡೆಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಟ್ರಕ್‍ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಉಗ್ರರು ಭದ್ರತಾ ಪಡೆಗಳತ್ತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಟ್ರಕ್‍ನಲ್ಲಿದ್ದ ಮತ್ತೋರ್ವ ಉಗ್ರ ಪಕ್ಕದ ಅರಣ್ಯ ಪ್ರದೇಶದತ್ತ ಓಡಿ ಹೋಗಿ ಪರಾರಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಘಟನೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದ್ದು, ಪರಾರಿಯಾಗಿರುವ ಉಗ್ರನಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.










