ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿ-ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

200
firstsuddi

ಶ್ರೀನಗರ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿರುವ ಬೆನ್ನಲೇ ಗಡಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಮೆಲಾಹುಲಾ ಎಂಬ ಪ್ರದೇಶದಲ್ಲಿ ಕೆಲವು ಉಗ್ರರು ಅಡಗಿಕೊಳಿತಿದ್ದಾರೆ ಎಂಬ ಮಾಹಿತಿಯನ್ನು ತಿಳಿದು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಬಳಿಕ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯ ಪ್ರವೃತ್ತರಾದ ಯೋಧರು ಪ್ರತಿದಾಳಿ ನಡೆಸಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.