ಉಡುಪಿಯಲ್ಲಿ ಐದು ಮಂದಿ ಕೊರೊನಾ ಶಂಕಿತರು ಆಸ್ಪತ್ರೆಗೆ ದಾಖಲು…

258
firstsuddi

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಐದು ಜನರಲ್ಲಿ ಶಂಕಿತ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಐವರಿಗೆ ಜಿಲ್ಲಾ ಆಸ್ಪತ್ರೆ ಹಾಗೂ ಒಬ್ಬರಿಗೆ ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ|ಸುಧೀರ್ ಚಂದ್ರ ಸೂಡ ಇತ್ತೀಚೆಗೆ ದುಬೈನಿಂದ ಮರಳಿದ್ದ ಮೂವರಲ್ಲಿ ಜ್ವರ, ಕೆಮ್ಮು, ಕತಾರ್ನಿಂದ ಬಂದ ವ್ಯಕ್ತಿಗೆ ತಲೆನೋವು, ಜ್ವರ, ಕುವೈತ್ನಿಂದ ಮರಳಿದ್ದ ಮಹಿಳೆಗೆ ಕೆಮ್ಮು, ಗಂಟಲು ಕೆರೆತ   ಶಂಕಿತ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು. ಐವರಿಗೆ ಜಿಲ್ಲಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ   ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಬುಧವಾರ ವರದಿ ಬರುವ ನಿರೀಕ್ಷೆ ಇದೆ ಎಂದು ಡಿಎಚ್ಒ ಸುಧೀರ್ ಚಂದ್ರ ಸೂಡ ತಿಳಿಸಿದರು.