ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಸ್ಪೋಟ-ಐವರು ಕಾರ್ಮಿಕರು ಸ್ಥಳದಲ್ಲೇ ಸಾವು…

151
firstsuddi

ಪಶ್ಚಿಮ ಬಂಗಾಳ : ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಸ್ಪೋಟ ಸಂಭವಿಸಿ ಸ್ಥಳದಲ್ಲೇ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಸುಜಾಪುರ್ ಬಸ್ ನಿಲ್ದಾಣ ಬಳಿ ಇರುವ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಸ್ಪೋಟ ಸಂಭವಿಸಿ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಸ್ಪೋಟಗೊಂಡ ಸದ್ದು ಕೇಳಿಸುತ್ತಿದ್ದಂತೆ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ರಕ್ಷಣೆ ಕಾರ್ಯಾಚರಣೆಯನ್ನು ಆರಂಭಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ಈ ಕುರಿತು ಮಾಲ್ಡಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.