ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ಯೋಜನೆಯನ್ನೇ ಮುಂದುವರೆಸಬೇಕೆಂದು ಒತ್ತಾಯ…

410
firstsuddi

ಚಿಕ್ಕಮಗಳೂರು: ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ಯೋಜನೆಯನ್ನೇ ಮುಂದುವರೆಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಡಾ|| ಬಗಾಧಿ ಗೌತಮ್ ಅವರನ್ನು ಸೋಮವಾರ ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ರಾಜ್ಯ 6ನೇ ವೇತನ ಆಯೋಗವು ನೂತನ ಪಿಂಚಣಿ ಯೋಜನೆಗೆ ಒಳಪಡುವ ಸಿಬ್ಬಂದಿಗಳಿಗೆ ಸಂಬಂಧಪಟ್ಟಂತೆ ಮರಣ ಮತ್ತು ನಿವೃತ್ತಿ ಉಪಧಾನ ಸೌಲಭ್ಯಗಳನ್ನು ವಿಸ್ತರಿಸಲು ಶಿಪಾರಸ್ಸು ಮಾಡಿರುವುದರ ಜೊತೆಗೆ ನೌಕರರು ಮೃತಪಟ್ಟ ಸಂದರ್ಭದಲ್ಲಿ ಪಿಂಚಣಿ ನಿಧಿಯಲ್ಲಿ ಕ್ರೋಢೀಕೃತವಾದ ಮೊತ್ತವನ್ನು ಸರ್ಕಾರ ಹಿಂಪಡೆಯುವ ಉಪಧಾನದೊಂದಿಗೆ ಕುಟುಂಬ ಪಿಂಚಣಿಯನ್ನು ನೀಡಲು ಶಿಫಾರಸ್ಸು ಮಾಡಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ನೂತನ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಅಥವಾ ಕೈಬಿಡುವ ಪರಮಾಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿದೆ ಎಂದು ತಿಳಿಸಿದರು.
ಮೇಲಿನ ವಾಸ್ತವಾಂಶವನ್ನು ಮತ್ತು ಪ್ರಸ್ತುತ ಆಯೋಗವು ಮಾಡಿರುವ ಶಿಪಾರಸ್ಸುಗಳನ್ನು ಪರಿಗಣಿಸಿ ನೂತನ ಪಿಂಚಣಿ ಯೋಜನೆಯನ್ನು ರದ್ದು ಪಡಿಸಬೇಕು, ಹಳೇ ವ್ಯವಸ್ಥೆಯನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿದರು.
ಸಂಘಧ ಜಿಲ್ಲಾಧ್ಯಕ್ಷ ಎಸ್.ಬಿ.ಪರಮೇಶ್ವರಪ್ಪ ಕಾರ್ಯದರ್ಶಿ ಜೆ.ಹೆಚ್.ಪ್ರಹ್ಲಾದ್, ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ|| ಸುದರ್ಶನ್, ಜಂಟಿ ಕಾರ್ಯದರ್ಶಿಗಳಾದ ಕೆ.ಎನ್.ಮಂಜುನಾಥ್, ಬಸವರಾಜ್, ಸಂಘಟನಾ ಕಾರ್ಯದರ್ಶಿ ಭವ್ಯ, ಎನ್.ಪಿ.ಎಸ್. ಅಧ್ಯಕ್ಷ ಚೇತನ್ ಹಾಜರಿದ್ದರು.