ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರ…

294
firstsuddi

ಚೆನ್ನೈ-ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು , ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದು, ಕಾವೇರಿ ಆಸ್ಪತ್ರೆಯ ವೈಧ್ಯರು ಕರುಣಾನಿಧಿ ಅವರಿಗೆ ಅವರ ಗೋಪಾಲಪುರಂ ನಿವಾಸದಲ್ಲಿ ಚಿಕಿತ್ಸೆಯನ್ನು ನೀಡುತ್ತಿದ್ದು, ಕರುಣಾನಿಧಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ತಮಿಳುನಾಡಿನ ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರೊಂದಿಗೆ ತಮಿಳುನಾಡಿನ ಬಹುತೇಕ ಸಚಿವರು ಹಾಗೂ ನಟ ಕಮಲ್ ಹಾಸನ್ ಅವರು ಭೇಟಿ ನೀಡಿ ಕರುಣಾನಿಧಿ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದ್ದಾರೆ.