ತಮಿಳುನಾಡು- ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ಮೂತ್ರನಾಳ ಸೋಂಕಿನಿಂದಾಗಿ ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿದ್ದರು. ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಚೆನ್ನೈಯ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ತಮಿಳುನಾಡಿನ ಡಿಜಿಪಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.