ಬೆಂಗಳೂರು- ಜೆ.ಡಿ.ಎಸ್ ಹಾಗೂ ಕಾಂಗ್ರೇಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಾಳೆ ನಡೆಯಲಿದ್ದು. ನಾಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ವಿಧಾನಸೌಧ ದಲ್ಲಿ ನಡೆಯಲಿದೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದು ಮೊದಲ ಸಮನ್ವಯ ಸಮಿತಿ ಸಭೆ. ಸಭೆಯಲ್ಲಿ ಬಾಕಿ ಉಳಿದಿರುವ ಸಚಿವ ಸ್ಥಾನಗಳ ಭರ್ತಿ ಮಾಡುವ ಬಗ್ಗೆ ನಿಗಮ ಮಂಡಳಿ ಅಧ್ಯಕ್ಷರ ನೇಮಕದ ಹಾಗೂ ಚುನಾವಣೆಯಲ್ಲಿ ಎರಡು ಪಕ್ಷಗಳ ಪ್ರಣಾಳಿಕೆ ಸೇರಿದಂತೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ, ಹಾಗೂ ಹಲವು ವಿಚಾರದ ಬಗ್ಗೆ ಸಭೆ ನಡೆಯಲಿದ್ದು. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಹಾಗೂ ಡಿ.ಸಿ.ಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಉಭಯ ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.