ಮೈಸೂರು – ಹಾಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುತ್ತೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಸ್ಪರ ನಾಯಕರು ಎದುರುಬದರಾದರು. ಈ ವೇಳೆ ವೇದಿಕೆಯಲ್ಲಿ ಕುಳಿತಿದ್ದ ಮಾಜಿ ಸಿಎಂ ಯಡಿಯೂರಪ್ಪ, ಹಾಲಿ ಸಿಎಂ ಎಚ್ ಡಿ ಕುಮಾರಸ್ವಾಮಿ ಬರುತ್ತಿದ್ದಂತೆ ಅವರನ್ನು ಬರಮಾಡಿಕೊಂಡು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡು, ಸುಮಾರು ಹೊತ್ತು ನಗುನಗುತ್ತಾ ಮಾತನಾಡಿಕೊಂಡರು. ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.