ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪೂರ್ತಿ ಮೆಂಟಲ್ ಆಗಿದ್ದಾರೆ : ಸದಾನಂದಗೌಡ.

148
firstsuddi

ಕೊಡಗು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪೂರ್ತಿ ಮೆಂಟಲ್ ಆಗಿಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಅವರು ಹೇಳಿದ್ದಾರೆ. ಸಿಎಂ ಸ್ಥಾನ ಬದಲಾವಣೆ ಆಗುತ್ತದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಶ್ನೆಯೇ ಇಲ್ಲ. ಈಗ ಮುಖ್ಯಮಂತ್ರಿ ಹುದ್ದೆ ಖಾಲಿಯೂ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಆಂತರಿಕ ಚರ್ಚೆ ಅಲ್ಲ. ಮುಂದೆಯೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಸಿದ್ದರಾಮಯ್ಯ ಅವರನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ. ಇತ್ತೀಚೆಗೆ ಸಿದ್ದರಾಮಯ್ಯ ಅವರು ಪೂರ್ತಿ ಮೆಂಟಲ್ ಆಗಿದ್ದಾರೆ. ಅವರ ಹುದ್ದೆಯನ್ನು ಉಳಿಸಿಕೊಳ್ಳುವುದೇ ಅವರಿಗೆ ಕಷ್ಟವಾಗಿದೆ ಎಂದು ಟಾಂಗ್ ನೀಡಿದರು.