ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ನಿಧನ…

161
firstsuddi

ನೆಲಮಂಗಲ : ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಚನ್ನಿಗಪ್ಪ ಅವರು ಕಳೆದ ಒಂದು ವರ್ಷದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿದೇಶದಲ್ಲಿ ಚಿಕಿತ್ಸೆ ಮುಗಿಸಿಕೊಂಡು ಬಂದ ಚನ್ನಿಗಪ್ಪ ಅವರಿಗೆ ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ನೆಲಮಂಗಲ ತಾಲ್ಲೂಕಿನ ಬೈರನಾಯಕನಹಳ್ಳಿಯಲ್ಲಿ ನಡೆಸಲಾಗುವುದು ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.