ಕೋಲ್ಕತ್ತಾ – ಲೋಕಸಭೆಯ ಮಾಜಿ ಸ್ಪೀಕರ್, ಸೋಮನಾಥ ಚಟರ್ಜಿ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದು, ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಗಸ್ಟ್ 10 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಮುಂಜಾನೆ 08:15ಕ್ಕೆ ಕೊನೆಯುಸಿರೆಳೆದಿದ್ದಾರೆ. ಚಟರ್ಜಿ ಅವರು 2004 ರಿಂದ 2009 ರವರೆಗೆ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.










