ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ…

307
firstsuddi

ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಈ ಮೂಲಕ ಕಳೆದ 4-5 ತಿಂಗಳಿಂದ ಇದ್ದ ಗೊಂದಲಗಳಿಗೆ ತೆರೆ ಎಳೆದಂತಾಗಿದೆ. ಹಾಗೂ ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಂದುವರೆಯಲಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಳಿಕ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಪಕ್ಷದಲ್ಲೇ ಹಲವಾರು ರಾಜಕೀಯ ಹೈಡ್ರಾಮಗಳು ನಡೆದಿದ್ದವು. ಇದರಿಂದಾಗಿ ಅಧ್ಯಕ್ಷರ ಆಯ್ಕೆ ವಿಳಂಬವಾಗುತ್ತಿತ್ತು.