ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ…

215
firstsuddi

ನವದೆಹಲಿ: ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್(88) ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ  ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರು ಇಂದು ಬೆಳಗ್ಗೆ ದೆಹಲಿಯಲ್ಲಿ  ವಿಧಿವಶರಾಗಿದ್ದಾರೆ. ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್ ಅವರು ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು .