ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿದ್ದ ಮಾಜಿ ಸಚಿವ ತಿಪ್ಪೇಸ್ವಾಮಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಿಪ್ಪೇಸ್ವಾಮಿಯವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಕಾಳಪ್ಪನಹಟ್ಟಿಯ ಗ್ರಾಮದವರಾಗಿದ್ದು, ತಮ್ಮ ರಾಜಕೀಯ ಜೀವನವನ್ನು ಜೆಡಿಎಸ್ ನೊಂದಿಗೆ ಪ್ರಾರಂಭಿಸಿದ್ದರು. ಇವರು ಮೂರು ಬಾರಿ ಚಳ್ಳಕೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡಿದ್ದರು. ಅಲ್ಲದೇ ದೇವೇಗೌಡರ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿ ಹಾಗೂ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಸಣ್ಣ ನೀರಾವರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್ ತೊರೆದು ಬಿಜೆಪಿ ಸೇರಿಕೊಂಡಿದ್ದ ತಿಪ್ಪೇಸ್ವಾಮಿಯವರು ಯಡಿಯೂರಪ್ಪನವರ ವಲಯದಲ್ಲಿ ಗುರುತಿಸಿಕೊಂಡಿದ್ದರು. ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರಾಗಿದ್ದ ಅವರು ವಾಲ್ಮೀಕಿ ಗುರುಪೀಠ ಸ್ಥಾಪನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು.