ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ಡಿ.4ಕ್ಕೆ ಮುಂದೂಡಿಕೆ…

123
firstsuddi

ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.4ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿನಯ್ ಕುಲಕರ್ಣಿ ಅವರ ಪರ ವಕೀಲರು ವಾಪಸ್ ಪಡೆದಿದ್ದರು. ಇದೀಗ ವಕೀಲರು ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ನ್ಯಾಯಾಲಯಕ್ಕೆ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯನ್ನು ಡಿ 4ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.