ಮಾಜಿ ಶಾಸಕ ಎಂಪಿ ರವೀಂದ್ರ ವಿಧಿವಶ…

385
firstsuddi

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಎಂ.ಪಿ.ರವೀಂದ್ರ(49) ವಿಧಿವಶರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 4.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಮೃತ ರವೀಂದ್ರ ಅವರು ದಿವಂಗತ ಮಾಜಿ ಉಪಮುಖ್ಯಮಂತ್ರಿ ಎಂಪಿ ಪ್ರಕಾಶ್ ಅವರ ಮಗನಾಗಿದ್ದ ಅವರು ಅತ್ಯಂತ ಪ್ರಾಮಾಣಿಕತೆ, ನಿಷ್ಠೆಗೆ ಹೆಸರುವಾಸಿಯಾಗಿದ್ದರು.