ಬೆಂಗಳೂರು : ಡಿ.ರ್. ಉಮಾಪತಿ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಮಲೆನಾಡು ಭಾಗದ ಹಿರಿಯ ನಾಯಕ ಉಮಾಪತಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.










