ಬೆಂಗಳೂರು: ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಜಮೀರ್ ಅಹಮದ್ ಖಾನ್ ರನ್ನು ಸೋಲಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ್ರು ಬಿಗ್ ಪ್ಲಾನ್ ಮಾಡಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಜಮೀರ್ ಅಹಮದ್ ಅವರಿಗೆ ಕಾಂಗ್ರೆಸ್ ನಿಂದ ಬಹುತೇಕ ಟಿಕೆಟ್ ಖಚಿತವಾಗಿದೆ ಅಂತಾ ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಜಮೀರ್ ಅಹಮದ್ ಅವರನ್ನು ತವರು ಕ್ಷೇತ್ರದಲ್ಲಿ ಸೋಲಿಸಲು ದೇವೇಗೌಡರು ಹೊಸ ಯೋಜನೆಯನ್ನು ರೂಪಿಸಿದ್ದಾರೆ ಎನ್ನಲಾಗಿದೆ. ಕಳೆದ 25 ವರ್ಷಗಳಿಂದ ಚಾಮರಾಜಪೇಟೆಯ ಕಾಂಗ್ರೆಸ್ ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಮುಖಂಡ ಬಿ.ಕೆ.ಅಲ್ತಾಪ್ ರನ್ನು ಜೆಡಿಎಸ್ ನತ್ತ ಸೆಳೆಯುವಲ್ಲಿ ದೇವೇಗೌಡರು ಯಶಸ್ವಿಯಾಗಿದ್ದಾರೆ ಅಂತಾ ಮೂಲಗಳು ತಿಳಿಸಿವೆ. ಬಿ.ಕೆ.ಅಲ್ತಾಪ್ ನಾಳೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ.
ಒಂದು ವೇಳೆ ಅಲ್ತಾಪ್ ಅವ್ರಿಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಲಭಿಸಿದ್ರೆ, ಜಮೀರ್ ಅಹ್ಮದ್ ಚುನಾವಣೆ ಕಷ್ಟವಾಗಲಿದೆ. ಇಬ್ಬರೂ ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧೆ ಮಾಡಿದಲ್ಲಿ ಮತಗಳು ಡಿವೈಡ್ ಆಗುವ ಸಾಧ್ಯತೆಗಳು ಹೆಚ್ಚಿವೆ. 2008ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಎಸ್. ಶ್ಯಾಮ್ ಸುಂದರ್ ಅವರನ್ನು ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಜಮೀರ್ ಅಹಮದ್ 19,590 ಮತಗಳ ಅಂತರದಿಂದ ಸೋಲಿಸಿದ್ದರು.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎ.ಬಾವ ಅವರನ್ನು 30162 ಮತಗಳ ಅಂತರದಿಂದ ಜಮೀರ್ ಸೋಲಿಸುವ ಮೂಲಕ ವಿಜಯ ಮಾಲೆಯಮನ್ನು ಧರಿಸಿದ್ದರು. 2005ರಲ್ಲಿ ನಡೆದ ಉಪ ಚುನಾವಣೆಯಲ್ಲಿಯೂ ಜೆಡಿಎಸ್ ನಿಂದ ಟಿಕೆಟ್ ಪಡೆದು ಜಮೀರ್ ಗೆಲುವನ್ನು ತಮ್ಮದಾಗಿಸಿಕೊಂಡಿದ್ದರು.