ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್ ವಿಧಿವಶ…

110
firstsuddi

ಮಂಗಳೂರು: ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.  ಕೆಲ ತಿಂಗಳುಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವಿ.ಧನಂಜಯ್ ಕುಮಾರ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಯಿಂದ 10 ರವರೆಗೆ ನಗರದ ಕದ್ರಿ ಕಂಬಳದಲ್ಲಿ ಇರುವ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.