ಕೋಲಾರ: ಟಾಟಾ ಸುಮೋ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿ ಬಳಿ ತಡರಾತ್ರಿ ನಡೆದಿದೆ. ಇಂಡಿಕಾ ಕಾರಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಟಾಟಾ ಸುಮೋ ಡಿಕ್ಕಿಯಾಗಿ ಯೋಧ, ನಿವೃತ್ತ ಯೋಧ ಸೇರಿದಂತೆ ನಾಲ್ಕು ಮಂದಿ ಸಾವನಪ್ಪಿದ್ದು, ಮೃತರನ್ನು ಕೆಜಿಎಫ್ ನಗರದ ಚಾಂಪಿಯನ್ ರೀಫ್ ನಿವಾಸಿಗಳು ಎನ್ನಲಾಗಿದ್ದು, ಮೃತರು ಟಾಟಾ ಇಂಡಿಕಾದಲ್ಲಿದ್ದ ಭರತ್ ಕುಮಾರ್, ರಿಗೋ, ಬಾಬು, ರಮೇಶ್ ಬಾಬು ಎಂದು ಗುರುತಿಸಲಾಗಿದೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.