ಪುಲ್ವಾಮಾ: ಉಗ್ರರ ಅಟ್ಟಹಾಸಕ್ಕೆ ಮತ್ತೆ ಓರ್ವ ಮೇಜರ್ ಸೇರಿದಂತೆ ಭಾರತೀಯ ಸೇನೆಯ ನಾಲ್ಕು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲಿನ ಪಿಂಗ್ಲನ್ ಪ್ರದೇಶದಲ್ಲಿ ಇಬ್ಬರು ಅಥವಾ ಮೂವರು ಉಗ್ರರು ಇರುವ ಮಾಹಿತಿ ಮೇರೆಗೆ ಸೇನಾ ಕಾರ್ಯಾಚರಣೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಸೇನಾ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.










