ಅಕ್ಟೋಬರ್ 12 ರಿಂದ 21 ರವರೆಗೆ ಹಾಸನ ದರ್ಶನಕ್ಕೆ ವಿಶೇಷ ಬಸ್ ವ್ಯವಸ್ಥೆಗೆ ಚಾಲನೆ

468

ಹಾಸನ : ಹಾಸನಾಂಬ ದೇವಿಯ ದರ್ಶನದ ಪ್ರಯುಕ್ತ ಅಕ್ಟೋಬರ್ 12 ರಿಂದ 21 ರವರೆಗೆ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಪ್ರವಾಸಿಗರಿಗಾಗಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯ ಪ್ರವಾಸಿ ಸ್ಥಳಗಳ ವೀಕ್ಷಣೆಗಾಗಿ ಹಾಸನ ದರ್ಶನ ವಿಶೇಷ ವ್ಯವಸ್ಥಿತ ಬಸ್ಸಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಅದ್ದೂರಿ ಚಾಲನೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಯಕರಹಳ್ಳಿ ಮಂಜೇಗೌಡ, ಉಪ ವಿಭಾಗಾಧಿಕಾರಿಗಳಾದ ಡಾ:ಹೆಚ್.ಎಲ್.ನಾಗರಾಜು, ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿತೇಂದ್ರನಾಥ್ ಯು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರವಿನಾಕಲಗೂಡು ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here