ಇಂದಿನಿಂದ ಸಿಎಂ ಜನತಾದರ್ಶನ ಆರಂಭ…

273
firstsuddi

ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ ಜನತಾದರ್ಶನ ಇಂದಿನಿಂದ ಆರಂಭಗೊಂಡಿದ್ದು,  ಗೃಹಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಯುತ್ತಿದ್ದು , ಕುಮಾರಸ್ವಾಮಿ ಜನರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಜನತಾ ದರ್ಶನದಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಯನ್ನು ಕೂಡ ನೇಮಿಸಲಾಗಿದೆ. ವಿಶೇಷ ಚೇತನರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ವಿಶೇಷಚೇತನರ ಬಳಿಯೇ ಹೋಗಿ ಸಮಸ್ಯೆ ಆಲಿಸಲಿದ್ದಾರೆ. ಉಳಿದವರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು ಅವರು ಸಾಲಿನಲ್ಲಿ ಬಂದು ಸಿಎಂ ಮುಂದೆ ಸಮಸ್ಯೆ ಹೇಳಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.