ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್(63) ಅವರು ನಿನ್ನೆ ವಿಧಿವಶರಾಗಿದ್ದು, ಕಲಾ
ಅಕಾಡೆಮಿಯಲ್ಲಿ ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು 5 ಗಂಟೆಗೆ ಗೋವಾದ ಮಿರಾಮರ್ ನಲ್ಲಿ ಪರಿಕ್ಕರ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿದು ಬಂದಿದೆ.










