ಕಾವೇರಿ ಹೋರಾಟಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ…

192
firstsuddi

ಮಂಡ್ಯ: ಕಾವೇರಿ ಹೋರಾಟಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕಾವೇರಿ ಹೋರಾಟಗಾರರ ಮೇಲೆ ಹಾಕಿದ್ದ ಕೇಸುಗಳನ್ನು   ವಾಪಾಸ್​ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ಮದ್ದೂರಿನಲ್ಲಿ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು  ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಕಾವೇರಿ ಹೋರಾಟದ ಸಮಯದಲ್ಲಿ ರೈತರ ಮೇಲೆ ದಾಖಲಾಗಿದ್ದ ಶೇ.95 ರಷ್ಟು ಕೇಸುಗಳನ್ನು ಕೈಬಿಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.