ಚಿಕ್ಕಮಗಳೂರು : ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ವಿದೇಯಕ ಮಂಡಿಸುವುದನ್ನು ವಿರೋಧಿಸಿ ಇಂದು ದೇಶಾದ್ಯಂತ ಖಾಸಗಿ ವೈದ್ಯರು ನಡೆಸುತ್ತಿರೋ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ 40ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳು ಹಾಗೂ ಜಿಲ್ಲಾದ್ಯಂತ ಇರೋ 150ಕ್ಕೂ ಹೆಚ್ಚು ಖಾಸಗಿ ಕ್ಲೀನಿಕ್ ನ ವೈದ್ಯರು ಸೇವ್ ಬಂದ್ ಮಾಡಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನ ಸಂಪೂರ್ಣ ಬಂದ್ ಮಾಡಿದ್ದು, ಚಿಕಿತ್ಸೆ ಸ್ಥಗಿತಗೊಳಿಸಿರೋದ್ರಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾದ್ಯಂತ 200ಕ್ಕೂ ಅಧಿಕ ಖಾಸಗಿ ವೈದ್ಯರು ತಮ್ಮ ಸೇವೆಯನ್ನ ಸಂಪೂರ್ಣ ಸ್ಥಗಿತಿಗೊಳಿಸಿದ್ದಾರೆ. ಈ ಬಗ್ಗೆ ಖಾಸಗಿ ವೈದ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ.
Home ನಮ್ಮ ಮಲ್ನಾಡ್ ದೇಶಾದ್ಯಂತ ಖಾಸಗಿ ವೈದ್ಯರು ನಡೆಸುತ್ತಿರೋ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಉತ್ತಮ ಪ್ರತಿಕ್ರಿಯೆ.