ಬೆಂಗಳೂರು : ದೇಶದಾದ್ಯಂತ ಆಗಸ್ಟ್ 22ರಂದು ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಸಾರ್ವಜನಿಕರ ಧಾರ್ಮಿಕ ಭಾವನೆಗಳಿಗೆ ಸ್ಪಂಧಿಸಿ, ಸಾಂಪ್ರಾದಾಯಿಕ ಗಣೇಶೋತ್ಸವ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
• ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಳ್ಲಿ ಅಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.
• ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.
• ಪಾರಂಪರಿಕ ಗಣೇಶೋತ್ಸವಕ್ಕಾಗಿ, ಗಣೇಶೋತ್ಸವ ಸಮಿತಿಗಳು/ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್/ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ/ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.
• ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಂದು ವೇಳೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆಭಕ್ತಾಧಿಗಳಿಗೆ ಅನುವು ಮಾಡುವುದು.
• ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ/ಸಂಗೀತ/ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.
• ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಬಗಳಲ್ಲೊ ಯಾವುದೇ ರೀತಿಯ ಮೆರವಣಿಗೆ ಹೊರಡಿಸತಕ್ಕದ್ದಲ್ಲ/ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
• ಪಾರಂಪಕರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೆಸ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ ಜಿಲ್ಲಾಡಳಿತ/ ಹತ್ತಿರದ ಸ್ಥಳಿಯ ಸಂಸ್ಥೆಗಳ/ ಕನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‍ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‍ಗಳಲ್ಲಿ ವಿಸರ್ಜಿಸುವುದು.










