ಶಾಸಕರಿಗೆ ಭದ್ರತೆ ಕೊಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ :ಬಿಎಸ್ ವೈ

163
firstsuddi

ಬೆಂಗಳೂರು: ಹಾಸನ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಶಾಸಕರಿಗೆ ಭದ್ರತೆ ಕೊಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ವಿವರಣೆ ನೀಡಲಾಗುವುದು. ಸರ್ಕಾರದ ಗೂಂಡಾಗಿರಿ ವಿರೋಧಿಸಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.