ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್ ಅವರ ನಿಧನ ಹಿನ್ನಲೆ ಇಂದು ಸರ್ಕಾರಿ ಕಚೇರಿ,ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದ್ದು,ಹಾಗೂ 3 ದಿನ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.











