ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಎನ್‍ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಅನಂತ್ ನಾಗ್ ಜಿಲ್ಲೆಯ ಸಿರ್ಹಾಮಾ ಎಂಬ ಪ್ರದೇಶದಲ್ಲಿ ಉಗ್ರರು ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿರುವುದನ್ನು ಗಮನಿಸಿದ ಯೋಧರು ಕಾರ್ಯಾಚರಣೆಗೆ ಮುಂದಾಗಿದ್ದರು. ಈ ವೇಳೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಯೋಧರು ಕೂಡಾ ಉಗ್ರರತ್ತ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.










