ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಟ್ವಿಟ್ ಮೂಲಕ ರಾಜ್ಯದ 156 ತಾಲ್ಲೂಕುಗಳು ಬರಪೀಡಿತವಾಗಿದ್ದು, ಈ ಸಂದರ್ಭದಲ್ಲಿ ಬಿಜೆಪಿಯು ತನ್ನ ಶಾಸಕರನ್ನು ಒಂದು ವಾರದಿಂದ ಉತ್ತರಭಾರತಕ್ಕೆ ಕಳುಹಿಸಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದೆ. ಸರ್ಕಾರ ಬೀಳಿಸುತ್ತೇವೆ ಎನ್ನುವ ಭ್ರಮೆಯಲ್ಲಿರುವ ಬಿಜೆಪಿಯಿಂದ ಬರ ಪೀಡಿತ ಕ್ಷೇತ್ರದ ಜನತೆಗೆ ಅನ್ಯಾಯವಾಗುತ್ತಿದೆ.ಇದಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ವಿರುದ್ಧ ಹೆಚ್ ಡಿ ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.











