ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಮೋದಿ ಅವರು ಯಾವ ಭದ್ರಕೋಟೆ ನಿರ್ಮಿಸುತ್ತಾರೆ?-ಹೆಚ್‍ಡಿಕೆ ಆಕ್ರೋಶ…

197
firstsuddi

ಬೆಂಗಳೂರು : ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆ. 24-25ರಂದು ಭಾರತಕ್ಕೆ ಆಗಮಿಸುತ್ತಿದ್ದು. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್‍ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್ ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ! ಆದರೆ ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ? ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ? ಎಂದು ಪ್ರಶ್ನಿಸಿದ್ದಾರೆ.