ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ …

1308
firstsuddi

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿಗೆ ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ವಿಜಯಲಕ್ಷ್ಮಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅವರ ಕುಟುಂಬದ ಫೋಟೋಗಳನ್ನು ದುರ್ಬಳಕೆ ಮಾಡಿದ್ದು, ವಿಜಯಲಕ್ಷ್ಮೀ ಅವರ ಫೋಟೋ ಹಾಕಿ ಮೈ ವೈಫ್ ಎಂದು ಟ್ಯಾಗ್ ಮಾಡಿ ಅಶ್ಲೀಲ ಶಬ್ದಗಳನ್ನು ಬಳಸಿದ್ದು,ಈ ಮೂಲಕ ತಮ್ಮ ಹೆಸರಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಈ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಜಯಲಕ್ಷ್ಮೀ ಅವರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್​​ 354(D),354A(1)(iv),(505)(507)(420)ಅಡಿಯಲ್ಲಿ ಪ್ರಕರಣ​ ದಾಖಲಾಗಿದೆ.