ಹಾಸನ ಬಿಜೆಪಿ ಅಧ‍್ಯಕ್ಷ ಯೋಗಾ ರಮೇಶ್ ಕಾಂಗ್ರೆಸ್‍ ಸೇರ್ಪಡೆ…

187
firstsuddi

ಬೆಂಗಳೂರು :ಹಾಸನ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಯೋಗ ರಮೇಶ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಯೋಗ ರಮೇಶ್  ಅವರನ್ನು ಅಧಿಕೃತವಾಗಿ  ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ  ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.