ಹಾಸನ : ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ-ಇಬ್ಬರ ಸ್ಥಿತಿ ಗಂಭೀರ…

211
firstsuddi

ಹಾಸನ : ಮುಂದೆ ಚಲಿಸುತ್ತಿದ್ದ ಸಾರಿಗೆ ಬಸ್ ಅನ್ನು ಓವರ್ ಟೇಕ್ ಮಾಡಲು ಹೋಗಿ ಮುಂದೆ ಬರುತಿದ್ದ ಕಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಗೆ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ತುಮಕೂರಿನಿಂದ ಬೇಳ್ತಂಗಡಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಈ ಕುರಿತು ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.